ಬೆಂಗಳೂರು, ಸ. 14 (DaijiworldNews/HR): ಮುಂದಿನ ದಿನಗಳಲ್ಲಿ ಎಲ್ಲಾದರೂ ಸಿದ್ದರಾಮಯ್ಯ ಗೆದ್ದರೂ, ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಪಣ ತೊಟ್ಟಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ, ಅವರಿಗೆ ನನ್ನ ಸಂಪೂರ್ಣ ಸಹಕಾರವಿದೆ" ಎಂದರು.
ಇನ್ನು ನಮ್ಮ ಪಕ್ಷದ ಒಬ್ಬ ಸಾಮಾನ್ಯ ಶಾಸಕನಂತೆ ಕೆಲಸ ಮಾಡುತ್ತೇನೆ, ನಾವು ನಮ್ಮ ಅಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡ್ತೇವೆ. ಒಬ್ಬ ಶಾಸಕನಾಗಿ ಕೆಲಸ ಮಾಡ್ತೇನೆ. ಸಿಎಂ ಆಗಿಯೇ ಕೆಲಸ ಮಾಡಬೇಕು ಅಂತ ಏನು ಇಲ್ಲ" ಎಂದಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಎಲ್ಲಾದರೂ ಸಿದ್ದರಾಮಯ್ಯ ಅವರು ಗೆದ್ದರೂ, ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ ಎಂದು ಹೇಳಿದ್ದಾರೆ.