ಜೈಪುರ, ಸ. 14 (DaijiworldNews/HR): ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಜೈಪುರದಲ್ಲಿ ಸೋರಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಜನರನ್ನು ಬಂಧಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಮೊಬೈಲ್ನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪತ್ತೆ ಹಚ್ಚಿದ ಜೈಪುರ ಪೊಲೀಸರು, ರಾಜಸ್ಥಾನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿರುವ ಪರೀಕ್ಷಾ ಕೇಂದ್ರದ ಯುವತಿ ಸೇರಿದಂತೆ ಒಟ್ಟು 8 ಜನರನ್ನು ಬಂಧಿಸಿದ್ದಾರೆ.
ರಾಜಸ್ಥಾನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ನೀಟ್ ಪರೀಕ್ಷಾ ಕೇಂದ್ರವಾಗಿದ್ದು, ಅಪರಾಧಿಗಳನ್ನು ಪತ್ತೆ ಮಾಡಲು ನಾಲ್ಕು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಡಿಸಿಪಿ ರಿಚಾ ತೋಮರ್ ಹೇಳಿದ್ದಾರೆ.
ಇನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು 35 ಲಕ್ಷ ರೂ.ಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಮೊಬೈಲ್ನಿಂದ ಫೋಟೋ ತೆಗೆಯುವ ಮೂಲಕ ಪ್ರಶ್ನೆ ಪತ್ರಿಕೆಯನ್ನು ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.