ಆಲಿಗಡ, ಸ. 14 (DaijiworldNews/HR): ಉತ್ತರ ಪ್ರದೇಶ ಸರ್ಕಾರವನ್ನು 2017ಕ್ಕೂ ಮುನ್ನ ದರೋಡೆಕೋರರು ಮತ್ತು ಮಾಫಿಯಾಗಳು ನಡೆಸುತ್ತಿದ್ದು, ಈಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಎಲ್ಲವೂ ಬದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಬಡವರಿಗೆ ಮೀಸಲಾದ ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಇರುವ ಎಲ್ಲ ದಾರಿಗಳನ್ನು ಮುಚ್ಚಲಾಗುತ್ತಿತ್ತು. ಆದರೆ ಈಗ ಅಂತಹ ಯಾವುದೇ ಅಡೆತಡೆಗಳಿಲ್ಲ ಮತ್ತು ಈ ಯೋಜನೆಗಳ ಪ್ರಯೋಜನಗಳು ಅಗತ್ಯವಿರುವವರಿಗೆ ತಲುಪುತ್ತಿವೆ" ಎಂದರು.
ಇನ್ನು "ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ ಮತ್ತು ಸಮಾಜ ಸುಧಾರಕರಾದ ರಾಜ ಮಹೇಂದ್ರ ಪ್ರತಾಪಸಿಂಹ ಅವರ ಸ್ಮರಣೆ ಮತ್ತು ಗೌರವಾರ್ಥವಾಗಿ ರಾಜ್ಯ ಸರ್ಕಾರ ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದೆ" ಎಂದಿದ್ದಾರೆ.