ಬೆಂಗಳೂರು, ಸೆ. 14 (DaijiworldNews/SM): ಎಷ್ಟೇ ಖರ್ಚಾದರೂ ಪರವಾಗಿಲ್ಲ ಎತ್ತಿನ ಹೊಳೆ ಯೋಜನೆಯನ್ನು ಪೂರ್ಣಗೊಳಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಎತ್ತಿನಹೊಳೆ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ. ಇದನ್ನು ಕಾರ್ಯಗತ ಮಾಡಲಾಗುವುದು ಎಂದಿದ್ದಾರೆ.
ಎತ್ತಿನಹೊಳೆ ಯೋಜನೆಯ ಬಗ್ಗೆ ಪ್ರಶ್ನೋತ್ತರ ಅವಧಿಯಲ್ಲಿ ಡಾ.ಜಿ.ಪರಮೇಶ್ವರ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉತ್ತರಿಸಿದರು.
ಪ್ರಸ್ತುತ ಪ್ರಮುಖವಾಗಿ ಭೂಸ್ವಾಧೀನ ಸಮಸ್ಯೆ ಇದ್ದು ಅದನ್ನು ಪರಿಹರಿಸಬೇಕಿದೆ. ಅಲ್ಲದೆ, ಸಮತೋಲಿತ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಿಸಬೇಕಿದೆ. ಹೀಗಾಗಿ 12 ಸಾವಿರ ಕೋಟಿ ರೂ. ಯೋಜನೆ. 23 ಸಾವಿರ ಕೋಟಿ ರೂ.ಗೆ ಏರಿಕೆ ಯಾಗಿದೆ ಎಂದರು.