ನವದೆಹಲಿ, ಸೆ.15 (DaijiworldNews/PY): ಲಕ್ನೋದಲ್ಲಿ ಉತ್ತರಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸಿದ ವೇಳೆ ರಾಷ್ಟ್ರಧ್ವಜವನ್ನು ಅವಮಾನಿಸಿದ ಆರೋಪದ ಮೇರೆಗೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮುಜಾಫರ್ ಮುರ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಿಕಂದರ್ ಪುರದ ನಿವಾಸಿ ಚಂದ್ರ ಕಿಶೋರ್ ಪರಾಶರ್ ಅವರು ಪ್ರಕರಣ ದಾಖಲಿಸಿದ್ದಾರೆ.
ಶವಸಂಸ್ಕಾರಕ್ಕೂ ಮುನ್ನ ಕಲ್ಯಾಣ್ ಸಿಂಗ್ ಅವರ ಪಾರ್ಥೀವ ಶರೀರದ ಮೇಲೆ ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಧ್ವಜವನ್ನು ಇರಿಸಿದ್ದ ಕಾರಣ ಜೆ.ಪಿ ನಡ್ಡಾ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆ ಎಂದು ಅವರು ದೂರಿದ್ದಾರೆ.
"ಇದನ್ನು ಬಿಜೆಪಿ ಉದ್ದೇಶಪೂರ್ವಕವಾಗಿ ಮಾಡಿದೆ. ನಡ್ಡಾ ಅವರ ನಡವಳಿಕೆಯಿಂದ ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ" ಎಂದು ಅರ್ಜಿದಾರರು ಹೇಳಿದ್ದಾರೆ.
ಈ ಪ್ರಕರಣದ ಬಗ್ಗೆ ನ್ಯಾಯಾಲಯ ಇನ್ನೂ ಬಗೆಹರಿಸಿಲ್ಲ ಅಥವಾ ವಿಚಾರಣೆಗೆ ದಿನಾಂಕ ನಿಗದಿ ಮಾಡಿಲ್ಲ ಎನ್ನಲಾಗಿದೆ.
ಕಲ್ಯಾಣ್ ಸಿಂಗ್ ಅವರ ಪಾರ್ಥೀವ ಶರೀರದ ಮೇಲೆ ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜ ಇರಿಸಿದ್ದ ಕಾರಣ ಉತ್ತರ ಪ್ರದೇಶ ಕಾಂಗ್ರೆಸ್ ಬಿಜೆಪಿಯನ್ನು ಟೀಕಿಸಿತ್ತು.
"ಯಾವಾಗಲೂ ಬಿಜೆಪಿ ನಾಯಕರು ರಾಷ್ಟ್ರಕ್ಕಿಂತ ಮೇಲಿನಂತೆ ವರ್ತಿಸುತ್ತಾರೆ ಹಾಗೂ ಘಟನೆ ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ" ಎಂದು ಉತ್ತರ ಪ್ರದೇಶ ಕಾಂಗ್ರೆಸ್ ವಕ್ತಾರ ಅಮರನಾಥ ಅಗರ್ವಾಲ್ ಹೇಳಿದ್ದರು.