ಬೆಂಗಳೂರು, ಸೆ 15 (DaijiworldNews/MS): ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ, " ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ ಸರ್ಕಾರ ಇರುವಂತ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದೇವಸ್ಥಾನ ಒಡೆದು ಹಾಕಿದ್ದು ತಪ್ಪು. ಸುಪ್ರಿಂ ಕೋರ್ಟ್ ನ ಅನೇಕ ಆದೇಶಗಳಿವೆ. ಸಂಸ್ಕೃತಿ ನಂಬಿಕೊಂಡು ಇರುವಂತ ಪಕ್ಷ ಬಿಜೆಪಿ. ಒಂದೇ ಒಂದು ದೇವಸ್ಥಾನ ಒಡೆಯುವುದು ತಪ್ಪು ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಯಲ್ಲಿ ನನಗೆ ಯಾವುದೇ ತಪ್ಪು ಕಂಡುಬಂದಿಲ್ಲ. ಯಾಕೆ ದೇವಸ್ಥಾನ ಕೆಡವಿದರು ಅನ್ನೋದು ಕೂಡ ಪ್ರಶ್ನೆಯೇ ಈಗಲಾದರೂ ಕಾಂಗ್ರೆಸ್ ನಾಯಕರಿಗೆ ದೇವಸ್ಥಾನ ಉಳಿಸಬೇಕು ಅಂತ ಅನಿಸಿದೆಯಲ್ಲ ಅದು ಮುಖ್ಯ ಎಂದು ಹೇಳಿದ್ದಾರೆ.
ಇಡೀ ರಾಜ್ಯದಲ್ಲಿ ದೇವಸ್ಥಾನಗಳನ್ನು ಯಾರೂ ಒಡೆಯಬಾರದು. ಸಧ್ಯ ಯಾರ ವಿರುದ್ದ ಕ್ರಮ ಕೈಗೊಳ್ಳಬೇಕು ಎನ್ನುವುದು ನನ್ನ ಉದ್ದೇಶವಲ್ಲ. ಈ ಬಗ್ಗೆ ಸಂಬಂಧ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ತೇವೆ. ಎಷ್ಟೇ ದೇವಸ್ಥಾನಗಳನ್ನು ಲಿಸ್ಟ್ ಮಾಡಿರಲಿ, ಯಾವುದನ್ನೂ ಒಡೆಯಬಾರದು ಎಂದು ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.