ಬೆಂಗಳೂರು, ಸೆ.15 (DaijiworldNews/PY): ರಾಜ್ಯ ಸಭಾ ಸದಸ್ಯ, ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಅಂತಿ ದರ್ಶನಕ್ಕಾಗಿ ಬೆಂಗಳೂರಿಗೆ ನಾಳೆ ಹಿರಿಯ ನಾಯಕರು ಆಗಮಿಸುವ ಸಾಧ್ಯತೆ ಇದೆ.
ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ನಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನದ ನಂತರ ಸೆ.15ರಂದು ಆಸ್ಕರ್ ಫೆರ್ನಾಡಿಸ್ ಅವರ ಮೃತದೇಹವನ್ನು ಬೆಂಗಳೂರಿಗೆ ರವಾನಿಸಲಾಗಿದೆ. ಸೆ.16ರಂದು ಬೆಂಗಳೂರಿನ ಚರ್ಚ್ನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲು ಸಿದ್ದತೆ ಮಾಡಲಾಗುತ್ತಿದೆ.
ಕೇಂದ್ರದ ಹಿರಿಯ ನಾಯಕರು ಆಸ್ಕರ್ ಫೆರ್ನಾಂಡಿಸ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ. ನಾಳೆ ಬೆಂಗಳೂರಿಗೆ ರಾಹುಲ್ ಗಾಂಧಿ ಅವರು ಆಗಮಿಸಲಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಆಗಮಿಸುವ ನಿರೀಕ್ಷೆ ಇದೆ.
ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಇಂದು ಸಂಜೆ 5 ಗಂಟಗೆ ದೇವನ ಹಳ್ಳಿಯ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗುತ್ತಿದ್ದು, ಪಾರ್ಥೀವ ಶರೀರವನ್ನು ಇಂದು ರಾತ್ರಿ ಶೈತ್ಯಾಗಾರದಲ್ಲಿ ಇಡಲಾಗುತ್ತದೆ. ಸೆ.16ರ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯ ತನಕ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.