ನವದೆಹಲಿ, ಸೆ.15 (DaijiworldNews/PY): "ವಾಯು ಮಾಲಿನ್ಯವನ್ನು ಗಮನದಲ್ಲಿರಿಸಿಕೊಂಡು ದೀಪಾವಳಿ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿರ್ಬಂಧ ಹೇರಲಾಗಿದೆ" ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ದೆಹಲಿಯ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಪಟಾಕಿಗಳ ಶೇಖರಣೆ, ಮಾರಾಟ ಹಾಗೂ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುವುದು" ಎಂದಿದ್ದಾರೆ.
"ದೆಹಲಿಯಲ್ಲಿ ವಾಯು ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಕಳೆದ 3 ವರ್ಷಗಳಿಂದ ದೀಪಾವಳಿ ಸಮಯದಲ್ಲಿ ಪಟಾಕಿ ಹಚ್ಚುವುದನ್ನು ನಿರ್ಬಂಧಿಸಲಾಗಿತ್ತು" ಎಂದು ತಿಳಿಸಿದ್ದಾರೆ.
"ಕಳೆದ ವರ್ಷದಂತೆ ಈ ಬಾರಿಯೂ ದೀಪಾವಳಿ ಸಂದರ್ಭ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಇದರಿಂದ ಜನರ ಜೀವನವನ್ನು ಕಾಪಾಡಬಹುದು" ಎಂದಿದ್ದಾರೆ.
"ಕಳೆದ ವರ್ಷ ವ್ಯಾಪಾರಿಗಳನ್ನು ಸಂಗ್ರಹಿಸಿದ ಬಳಿಕ ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ನಿಷೇಧ ಹೇರಲಾಗಿತ್ತು. ಇದರಿಂದ ವ್ಯಾಪಾರಿಗಳಿಗೆ ನಷ್ಟವಾಗಿತ್ತು. ಆದರೆ, ಈ ಬಾರಿ ಸಂಪೂರ್ಣ ನಿಷೇಧದ ದೃಷ್ಟಿಯಿಂದ ಯಾರೂ ಕೂಡಾ ಶೇಖರಣೆ ಮಾಡುವಂತಿಲ್ಲ" ಎಂದು ಹೇಳಿದ್ದಾರೆ.