ಮುಂಬೈ, ಸೆ.15 (DaijiworldNews/PY): ನಟ ಸೋನು ಸೂದ್ ಅವರಿಗೆ ಸಂಬಂಧಿಸಿದ ಆರು ಪ್ರದೇಶಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸರ್ವೇ ನಡೆಸಿದ್ದಾರೆ.
ಅವ್ಯವಹಾರ ನಡೆಸಿರುವ ಬಗ್ಗೆ ಐಟಿ ಇಲಾಖೆಗೆ ಮಾಹಿತಿ ಬಂದಿದ್ದು, ಈ ಕಾರಣಕ್ಕೆ ಸೋನು ಸೂದ್ ಹಾಗೂ ಅವರಿಗೆ ಆರು ಪ್ರದೇಶಗಳಲ್ಲಿ ಐಟಿ ಇಲಾಖೆ ಸರ್ವೇ ನಡೆಸಿದೆ. ಇದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.
ಕಳೆದ ವರ್ಷ ಕೊರೊನಾ ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ಬಳಿ ಅವರು ಉತ್ತಮ ಕಾರ್ಯ ನಿರ್ವಹಿಸಿದ್ದು, ಸಂಕಷ್ಟದಲ್ಲಿರುವವರ ಸಹಾಯಕ್ಕೆ ನಿಂತಿದ್ದಾರೆ.
ಕೊರೊನಾ ಸಂಕಷ್ಟದ ಸಂದರ್ಭ ಸೋನು ಸೂದ್ ಅವರು ನೆರವು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ರಾಷ್ಟ್ರೀಯ ಅಲ್ಲದೇ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ.