ಬೆಂಗಳೂರು, ಸೆ. 15 (DaijiworldNews/SM): ಅನಾರೋಗ್ಯದಿಂದ ನಗರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರ ಬೆಂಗಳೂರಿಗೆ ರವಾನೆಯಾಗಿದೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ರವಾನೆ ಮಾಡಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರು ಏರ್ ಪೋರ್ಟ್ ನತ್ತ ಪ್ರಯಾಣ ರಸ್ತೆ ಮಾರ್ಗವಾಗಿ ರವಾನಿಸಿ ಬಳಿಕ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ರವಾನಿಸಲಾಗಿದೆ. ದ.ಕ ಜಿಲ್ಲಾ ಕಾಂಗ್ರೆಸ್ ಮತ್ತು ಮುಖಂಡರಿಂದ ವಿಶೇಷ ವಿಮಾನದ ವ್ಯವಸ್ಥೆ ಮಾಡಲಾಗಿತ್ತು. ವಿಮಾನದಲ್ಲಿ ಆಸ್ಕರ್ ಕುಟುಂಬಿಕರು, ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸೇರಿ 40 ಮಂದಿ ಪ್ರಯಾಣ ಬೆಳೆಸಿದ್ದರು.
ಬೆಂಗಳೂರು ತಲುಪಿ ನಾಳೆ ಕೆಪಿಸಿಸಿ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಬೆಂಗಳೂರಿಗೆ ಸೈಂಟ್ ಪ್ಯಾಟ್ರಿಕ್ ಚರ್ಚ್ ನಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ.