ಹೈದರಾಬಾದ್,ಸ.16 (DaijiworldNews/HR): ಇತ್ತೀಚಿಗೆ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪಿ ಪಲ್ಲಂಕೊಂಡ ರಾಜು ಇಂದು ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ.
ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಹೊತ್ತಿದ್ದ ಆರೋಪಿ ರಾಜು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೂಲಗಳು ಮಾಹಿತಿ ನೀಡಿದ್ದು, ಆತನ ಕೈ ಮೇಲಿನ ಹಚ್ಚೆಯ ಆಧಾರದ ಮೇಲೆ ರಾಜುವನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 9 ರ ಗುರುವಾರದಂದು ಹೈದರಾಬಾದ್ನ ಸೈದಾಬಾದ್ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯಾಗಿದ್ದ ಪಲಕೊಂಡ ರಾಜು ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಬಾಲಕಿಯನ್ನು, ಪೋಷಕರು ರಾತ್ರಿವರೆಗೂ ಹುಡುಕಾಡಿದರೂ ಪತ್ತೆಯಾಗದೆ ಇದ್ದದ್ದರಿಂದ ಸೈದಾಬಾದ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರಿಗೆ ದೂರು ನೀಡಿದ ನಂತರ, ನೆರೆ ಮನೆಯ ವ್ಯಕ್ತಿ ಕೂಡಾ ಕಾಣೆಯಾಗಿದ್ದು ಅನುಮಾನ ಬಂದಿದ್ದ ರಿಂದ, ಪೊಲೀಸರೊಂದಿಗೆ ಹೋಗಿ ಅಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಬಾಲಕಿಯ ಮೃತದೇಹ ಬೆಡ್ಶೀಟ್ನಲ್ಲಿ ಸುತ್ತಿರುವುದನ್ನು ಕಂಡುಬಂದಿದೆ. ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಡೆದ ಶವಪರೀಕ್ಷೆಯಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಖಚಿಪಟ್ಟಿದೆ. ಜೊತೆಗೆ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪರೀಕ್ಷೆಯಲ್ಲಿ ತಿಳಿದುಬಂದಿದೆ. ಈ ಘಟನೆಯ ನಂತರ, ಭಾರೀ ಪ್ರತಿಭಟನೆಗಳು ಭುಗಿಲೆದ್ದು, ಕಲ್ಲು ತೂರಾಟವೂ ನಡೆದಿತ್ತು.
ಈ ಮಧ್ಯೆ, ತೆಲಂಗಾಣ ಕಾರ್ಮಿಕ ಸಚಿವ ಚಿ ಮಲ್ಲಾರೆಡ್ಡಿ ಮಂಗಳವಾರ ಆರೋಪಿಯನ್ನು "ಎನ್ ಕೌಂಟರ್" ಮಾಡುವಂತೆ ಒತ್ತಾಯಿಸಿದ್ದಾರೆ ಹೈದರಾಬಾದ್ ಪೊಲೀಸರು, ಆರೋಪಿ ಚಿತ್ರವನ್ನು ಬಿಡುಗಡೆ ಮಾಡಿ, ಆತನ ಬಗ್ಗೆ ಮಾಹಿತಿ ನೀಡಿದರೆ 10 ಲಕ್ಷ ರೂಪಾಯಿ ಬಹುಮಾನ ಕೂಡ ಘೋಷಿಸಿದ್ದರು.