ಬೆಂಗಳೂರು, ಸೆ. 15 (DaijiworldNews/SM): ರಾಜ್ಯದ ಜನತೆಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮುಂದಡಿ ಇರಿಸಿದೆ. ಪ್ರಸ್ತುತ ರಾಜ್ಯದಲ್ಲಿರುವ ವೈದ್ಯರ ಕೊರತೆ ನೀಗಿಸಲು ಸರಕಾರ ಮುಂದಾಗಿದ್ದು, 1040 ವೈದ್ಯರನ್ನು ನೇಮಿಸಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ದಿನಕರ್ ಕೇಶವಶೆಟ್ಟಿ ಪ್ರಶ್ನೆಗೆ ಸಚಿವರು ಉತ್ತರಿಸಿದರು. 860 ವೈದ್ಯರು ಕೆಲಸದ ಮೇಲೆ ಹಾಜರಾಗಿದ್ದಾರೆ. ಅವರಿಗೆ ಈಗಾಗಲೇ ಸ್ಥಳ ನಿಯುಕ್ತಿ ಮಾಡಲಾಗಿದೆ ಎಂದು ಸಚಿವರು ಸಭೆಗೆ ಮಾಹಿತಿ ನೀಡಿದ್ದಾರೆ.
ಇನ್ನು 180 ಸ್ಥಳಗಳಿಗೆ ವೈದ್ಯರು ಹಾಜರಾಗಿಲ್ಲ. ಅವರ ಸಮಸ್ಯೆಗಳನ್ನು ಆಲಿಸಲಾಗುವುದು. ಹಾಗೂ ಶೀಘ್ರದಲ್ಲೇ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.