ಬೆಂಗಳೂರು, ಸೆ.17 (DaijiworldNews/PY): ಇಂದು ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟುಹಬ್ಬವಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದು, "ಆದರಣೀಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ 71ನೇ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ಸದೃಢ, ಸಶಕ್ತ, ಸಮರ್ಥ ನವಭಾರತ ನಿರ್ಮಾಣದೆಡೆಗೆ ದೇಶವನ್ನು ಮುನ್ನಡೆಸುತ್ತಿರುವ ತಮಗೆ, ದೇವರು ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ತಮ್ಮ ನಾಯಕತ್ವಕ್ಕೆ ಮತ್ತಷ್ಟು ಶಕ್ತಿಯನ್ನು ಕರುಣಿಸಲಿ" ಎಂದಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮಗೆ ಜನ್ಮದಿನದ ಶುಭಾಶಯಗಳು. ನಾನು ನಿಮಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ಲಭಿಸಲೆಂದು ಹಾರೈಸುತ್ತೇನೆ" ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾರೈಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, "ದೇಶದ ನೆಚ್ಚಿನ ನಾಯಕ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದು, "ನರೇಂದ್ರ ಮೋದಿ ಅವರಿಗೆ 71ನೇ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಕರುಣಿಸಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ" ಎಂದು ತಿಳಿಸಿದ್ದಾರೆ.