ನವದೆಹಲಿ, ಸ.17 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲು ಕಾಂಗ್ರೆಸ್ ಪಕ್ಷವು ಮುಂದಾಗಿದೆ.
ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ 71ನೇ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಈ ಹಿನ್ನೆಯಲ್ಲಿ ಬಿಜೆಪಿ ದೇಶಾದ್ಯಂತ ಸೇವಾ ದಿವಸ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಬಿಜೆಪಿ ಕಾರ್ಯಕರ್ತರು ಇಂದಿನಿಂದ 20 ದಿನಗಳ ಕಾಲ ಸೇವಾ ದಿವಸ್ ಕಾರ್ಯಕ್ರಮದಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, 20 ದಿನಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದ ಕೊರೊನಾ ಲಸಿಕೆ ನೀಡಲು ಕೇಂದ್ರ ಆರೋಗ್ಯ ಇಲಾಖೆ ಯೋಜನೆ ಹಮ್ಮಿಕೊಂಡಿದೆ.
ಇನ್ನು ಈ ನಡುವೆ ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನದಂದೇ ಕಾಂಗ್ರೆಸ್ ದೇಶದ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಪ್ರಧಾನಿ ಮೋದಿ ನೀಡಿದ್ದ ಉದ್ಯೋಗ ಸೃಷ್ಟಿ ಭರವಸೆಗಳು ಸುಳ್ಳಾಗಿದ್ದು, ದೇಶದಲ್ಲಿ ಯುವಜನತೆ ನಿರುದ್ಯೋಗಿಗಳಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುವುದಾಗಿ ಕಾಂಗ್ರೆಸ್ ಹೇಳಿದೆ