ಮೈಸೂರು, ಸ.17 (DaijiworldNews/HR): ರಾಜ್ಯದಲ್ಲಿ ದೇವಾಲಯಗಳನ್ನು ತೆರವು ಮಾಡಿದ್ದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಮಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಅನಧಿಕೃತ ದೇವಾಲಯಗಳ ತೆರವು ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ದೇವಾಲಯಗಳನ್ನು ತೆರವುಗೊಳಿಸಿರುವ ನೀತಿ ಸರಿಯಲ್ಲ" ಎಂದರು.
ಇನ್ನು ರಾಜ್ಯದಲ್ಲಿ ದೇವಾಲಯಗಳನ್ನು ತೆರವು ಮಾಡಿದ್ದು ಸರಿಯಲ್ಲ. ದೇವಾಲಯ ತೆರವು ಮಾಡದಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮೊದಲೇ ಚರ್ಚೆ ಮಾಡಬೇಕಿತ್ತು. ಯಾವುದೇ ಕಾರಣಕ್ಕೂ ದೇವಾಲಯಗಳನ್ನು ತೆರವು ಮಾಡದಂತೆ ಆಗ್ರಹಿಸಿದ್ದಾರೆ.