ದೆಹಲಿ , ಸ.17 (DaijiworldNews/HR): ಲೋಧಿ ರಸ್ತೆ ಪ್ರದೇಶದಲ್ಲಿರುವ ಸಿಬಿಐ ಕಟ್ಟಡದ ನೆಲಮಾಳಿಗೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿದ್ದಂತ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಗಿದೆ.
ಲೋಧಿ ರಸ್ತೆ ಪ್ರದೇಶದ ಸಿಜಿಒ ಸಂಕೀರ್ಣದಲ್ಲಿರುವ ಸಿಬಿಐ ಕಟ್ಟಡದ ನೆಲಮಾಳಿಗೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಕಟ್ಟಡದಲ್ಲಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದ್ದು, ಎಂಟು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.