ಮುಂಬೈ, ಸ.17 (DaijiworldNews/HR): ತೆರಿಗೆ ವಂಚನೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.
ಅನಿಲ್ ದೇಶಮುಖ್ಗೆ ಮುಂಬೈ, ನಾಗಪುರ ಮತ್ತು ರಾಜಸ್ಥಾನದ ಜೈಪುರದಲ್ಲಿ ಸೇರಿರುವ ಕೆಲ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಮಹಾರಾಷ್ಟ್ರದ ಪೊಲೀಸ್ ಇಲಾಖೆಯಲ್ಲಿನ 'ಕಿಕ್ ಬ್ಯಾಕ್' ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ದೇಶಮುಖ್ ಅವರ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿವೆ.