ಬೆಂಗಳೂರು, ಸೆ.17 (DaijiworldNews/PY): ಕಾಂಗ್ರೆಸ್ ಹಾಗೂ ಜೆಡಿಎಸ್ ಸಭಾತ್ಯಾಗದ ನಡುವೆಯೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಮೀಸಲಾತಿ, ಕ್ಷೇತ್ರ ಪುನರ್ವಿಂಗಡಣೆ ಅಧಿಕಾರವನ್ನು ಚುನಾವಣಾ ಆಯೋಗದಿಂದ ವಾಪಾಸ್ ಪಡೆಯುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ಇಂದು ವಿಧಾನ ಪರಿಷತ್ನಲ್ಲಿ ಅಂಗೀಕಾರ ನೀಡಲಾಯಿತು.
ವಿಧಾನಸಭೆಯಿಂದ ಅಂಗೀಕಾರಗೊಂಡ ಕರ್ನಾಟ ಗ್ರಾಮ ಸ್ವರಾಜ್ ಹಾಗೈ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ವಿಧಾನ ಪರಿಷತ್ನಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಮಂಡಿಸಿದರು.
ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಅವರು ತಿದ್ದುಪಡಿ ವಿಧೇಯಕವನ್ನು ವಿರೋಧಿಸಿದ್ದು, ಅಲ್ಲದೇ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ಇದರ ನಡುವೆಯೇ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್ನಲ್ಲಿ ಅಂಗೀಕಾರಗೊಂಡಿದೆ.