ನವದೆಹಲಿ, ಸೆ. 17 (DaijiworldNews/SM): ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದಂದು ಹೊಸ ಮೈಲಿಗಲ್ಲು ಬರೆಯಲಾಗಿದ್ದು, ದೇಶದೆಲ್ಲೆಡೆ ಎರಡು ಕೋಟಿ ಜನರಿಗೆ ಲಸಿಕೆ ವಿತರಿಸಲಾಗಿದೆ ಎಂದು ತಿಳಿದುಬಂದಿದೆ.
"ಪ್ರಧಾನಿ ಮೋದಿಯವರ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಈ ಮುಂಚೆ ತಿಳಿಸಿದ್ದವು. ಅದರಂತೆ ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನದಂದು ಈ ಸಾಧನೆಯ ಗುರಿ ಮುಟ್ಟಲಾಗಿದೆ.
ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಹುಟ್ಟುಹಬ್ಬದ ಉಡುಗೊರೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.