ದಾವಣಗೆರೆ, ಸ. 18 (DaijiworldNews/HR): ಬಿಜೆಪಿಯು ದೇವಸ್ಥಾನಗಳನ್ನು ನಿರ್ಮಿಸಿ ಅದನ್ನು ಉಳಿಸುವ ಕೆಲಸ ಮಾಡುತ್ತಿದೆ. ಆದರೆ ಸಿದ್ದರಾಮಯ್ಯ ಹಿಂದೂ ವಿರೋಧಿ, ದೇವಸ್ಥಾನಗಳನ್ನು ಉಳಿಸುವ ಬಗ್ಗೆ ಈಗ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಜೆಪಿಯು ದೇವಸ್ಥಾನಗಳನ್ನು ಉಳಿಸುವ ಕೆಲಸ ಮಾಡುತ್ತಿದ್ದು, ಈ ಮೊದಲು ಕಾಂಗ್ರೆಸ್ ನವರು ಮಸೀದಿಗಳ ಬಗ್ಗೆ ಮಾತನಾಡುತ್ತಿದ್ದರು. ಈಗ ಸಿದ್ದರಾಮಯ್ಯ ದೇವಾಲಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ದೇವಾಲಯಗಳ ಬಗ್ಗೆ ಮಾತನಾಡುವುದನ್ನು ಸಿದ್ದರಾಮಯ್ಯ ಯಾವಾಗ ಕಲಿತರು" ಎಂದು ವ್ಯಂಗ್ಯವಾಗಿ ನುಡಿದಿದ್ದಾರೆ.
ಇನ್ನು "ಯಡಿಯೂರಪ್ಪ ಅವರು ಹಿರಿಯ ನಾಯಕ, ಅವರು ಯಾವಾಗ ಬೇಕಾದರೂ ರಾಜ್ಯ ಪ್ರವಾಸ ಮಾಡಬಹುದು. ಬಿಎಸ್ ವೈ ಪ್ರವಾಸ ಮಾಡಿದರೆ ಬಿಜೆಪಿಗೆ ಲಾಭವಾಗಲಿದೆ" ಎಂದು ಹೇಳಿದ್ದಾರೆ.