ಪಂಜಾಬ್, ಸ. 18 (DaijiworldNews/HR): ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವ್ರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಶನಿವಾರ ಮಧ್ಯಾಹ್ನ 2 ಗಂಟೆಯ ಬಳಿಕ ಚಂಡೀಗಢದ ಅವರ ಅಧಿಕೃತ ನಿವಾಸದಲ್ಲಿ ಅವರ ಆಪ್ತ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬದಲಾಯಿಸಬೇಕೆಂದು 50ಕ್ಕೂ ಹೆಚ್ಚು ಶಾಸಕರು ಪಕ್ಷದ ಹೈಕಮಾಂಡ್ʼಗೆ ಪತ್ರ ಬರೆದ ನಂತ್ರ ಈ ಬೆಳವಣಿಗೆ ನಡೆದಿದ್ದು, ರಾಜ್ಯದಲ್ಲಿ ಮುಂದಿನ ನಾಲ್ಕು ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.