ನವದೆಹಲಿ, ಸ. 19 (DaijiworldNews/HR): ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಮುಂದಿನ ಮುಖ್ಯಮಂತ್ರಿಯಾಗುವ ಪ್ರಸ್ತಾಪವನ್ನು ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಂಬಿಕಾ ಸೋನಿ ಅವರು ರಾಹುಲ್ ಗಾಂಧಿಯವರೊಂದಿಗೆ ತಡರಾತ್ರಿ ನಡೆಸಿದ್ದ ಸಭೆಯಲ್ಲಿಮುಖ್ಯಮಂತ್ರಿಯಾಗುವ ಪ್ರಸ್ತಾಪವನ್ನು ನಿರಾಕರಿಸಿದರು ಎಂದು ತಿಳಿದು ಬಂದಿದೆ.
ಇನ್ನು ಹಿರಿಯ ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ ಅವರನ್ನು 1969 ರಲ್ಲಿ ಇಂದಿರಾ ಗಾಂಧಿ ಪಕ್ಷಕ್ಕೆ ಕರೆತಂದಿದ್ದು, ವಿಭಜನೆಯ ಸಮಯದಲ್ಲಿ ಅವರ ತಂದೆ ಅಮೃತಸರದ ಜಿಲ್ಲಾಧಿಕಾರಿಯಾಗಿದ್ದರು ಮತ್ತು ನೆಹರು ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು ಎನ್ನಲಾಗಿದೆ.
ಪಂಜಾಬ್ನಲ್ಲಿ ವಿಧಾನಸಭಾ ಚುನಾವಣೆ ನಡೆಯಲು ತಿಂಗಳುಗಳ ಬಾಕಿ ಇರುವಾಗ ಸಿಂಗ್ ಅವರು ರಾಜೀನಾಮೆ ನೀಡಿದ್ದಾರೆ.