ದಾವಣಗೆರೆ, ಸೆ.19 (DaijiworldNews/PY): ದೇವಾಲಯ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಮೊರೆಹೋಗುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ಧಾರೆ.
ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, "ದೇವಾಲಯ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಗೊಂದಲ ಇದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರ ಸರಿಯಿಲ್ಲ ಎಂದೆನಿಸುತ್ತದೆ. ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಕನಿಕರಲ್ಲಿಯೂ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ ಮರುಪರಿಶೀಲನೆ ಕೋರಿ ಸುಪ್ರೀಂ ಕೋರ್ಟ್ ಮರೆ ಹೋಗುತ್ತೇವೆ" ಎಂದಿದ್ದಾರೆ.
ಇದಕ್ಕೂ ಮೊದಲು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ದೇವಾಲಯ ತೆರವು ಕುರಿತು ದುಡುಕಿನ ತೀರ್ಮಾನ ಕೈಗೊಳ್ಳುವುದು ಬೇಡ" ಎಂದು ಹೇಳಿದ್ದಾರೆ.