ಬೆಂಗಳೂರು, ಸ. 19 (DaijiworldNews/HR): ಆಗಸ್ಟ್ 28, 29 ಹಾಗೂ 30ರಂದು ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಸೆಪ್ಟಂಬರ 20ರಂದು ಸೋಮವಾರ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, "ದಾಖಲೆಯ ಕಡಿಮೆ ಕಾಲಾವಧಿಯಲ್ಲೇ ಫಲಿತಾಂಶ ಪ್ರಕಟವಾಗುತ್ತಿದ್ದು, ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ" ಎಂದರು.
ಇನ್ನು ಫಲಿತಾಂಶವು ಸೋಮವಾರ ಸಂಜೆ 4 ಗಂಟೆ ಬಳಿಕ https://cetonline.karnataka.gov.in/kea ಲಿಂಕ್ ನಲ್ಲಿ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.