ಲಕ್ನೋ, ಸೆ.19 (DaijiworldNews/PY): "ಬಿಜೆಪಿ ನೇತೃತ್ವದ ಸರ್ಕಾರ ಉತ್ತರಪ್ರದೇಶದಲ್ಲಿ ಉತ್ತಮ ಆಡಳಿತ ನೀಡಿದ್ದು, ಮೈಲುಗಲ್ಲು ಸಾಧಿಸಿದೆ" ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ರಾಜ್ಯದಲ್ಲಿ ತಮ್ಮ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ನಾಲ್ಕೂವರೆ ವರ್ಷ ಪೂರೈಸಿದ ಹಿನ್ನೆಲೆ ಮಾತನಾಡಿದ ಅವರು, "ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತ ಮುಂದಿನ ದಿನಗಳಲ್ಲಿ ಒಂದು ಹೆಗ್ಗುರುತಾಗಲಿದೆ" ಎಂದಿದ್ದಾರೆ.
"ಈ ನಾಲ್ಕೂವರೆ ವರ್ಷಗಳ ಅವಧಿಯಲ್ಲು ನಮ್ಮ ಸರ್ಕಾರಕ್ಕೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ನೆರವಾದ ಪಕ್ಷದ ವರಿಷ್ಠರು ಸೇರಿದಂತೆ ಕಾರ್ಯಕರ್ತರಿಗೆ ಕೃತಜ್ಞನಾಗಿದ್ದೇನೆ. ಕೇಂದ್ರದಲ್ಲೂ ಕೂಡಾ ಬಿಜೆಪಿ ಸರ್ಕಾರವಿದೆ. ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಸಂಘಟಿತರಾಗಿ ಎಲ್ಲರೂ ಜೊತೆಯಾಗಿ ಕಾರ್ಯ ನಿರ್ವಹಿಸಬೇಕಿದೆ" ಎಂದು ತಿಳಿಸಿದ್ದಾರೆ.
"ರಾಜ್ಯವು ರಾಷ್ಟ್ರೀಯ ಸುಲಭ ವ್ಯಾಪಾರ ಶ್ರೇಯಾಂತದಲ್ಲಿ ಎರಡನೇ ಸ್ಥಾನದಲ್ಲಿದೆ" ಎಂದಿದ್ದಾರೆ.