ನವದೆಹಲಿ, ಸೆ.19 (DaijiworldNews/PY): "ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹಾನಿ ಉಂಟು ಮಾಡುವ ಕ್ರಮ ತೆಗೆದುಕೊಳ್ಳುವುದಿಲ್ಲ" ಎಂದು ರಾಜಸ್ತಾನದ ಸಿಎಂ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಅಮರಿಂದರ್ ಸಿಂಗ್ ಅವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿದ್ದಾರೆ. ಪಂಜಾಬ್ ಜನರ ಸೇವೆ ಮಾಡಿದ್ದಾರೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪಕ್ಷದ ಗೌರವಾನ್ವಿತ ನಾಯಕರು. ಮುಂದೆಯೂ ಅವರು ಪಕ್ಷದ ಹಿತಾಸಕ್ತಿಗಳನ್ನು ಮುಂದಿಟ್ಟುಕೊಂಡು ಕೆಲಸ ಮಾಡಲಿ ಎಂದು ನಾನು ಆಶಿಸುತ್ತೇನೆ" ಎಂದಿದ್ದಾರೆ.
"ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಕಾಂಗ್ರೆಸ್ ಪಕ್ಷಕ್ಕೆ ಹಾನಿ ಉಂಟುಮಾಡುವ ಯಾವುದೇ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಕ್ಯಾಪ್ಟನ್ ಸಾಹಿಬರೇ ಹೇಳಿರುವಂತೆ ಪಕ್ಷವು ಒಂಭತ್ತೂವರೆ ವರ್ಷಗಳು ಪ್ರಮುಖ ಹೊಣೆಗಾರಿಜೆಯನ್ನು ನೀಡಿದೆ" ಎಂದು ಹೇಳಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.