ನವದೆಹಲಿ, ಸೆ. 19 (DaijiworldNews/HR): ಸಾಕಷ್ಟು ಚರ್ಚೆ ಮತ್ತು ಸಭೆಗಳ ಬಳಿಕ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ ಜಿಂದರ್ ರಾಂಧವ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ ಎಂದು ತಿಳಿದು ಬಂದಿದೆ.
ಪಂಜಾಬ್ ಶಾಸಕರೊಂದಿಗೆ ಚರ್ಚಿಸಿದ ಬಳಿಕ ಸಿಎಂ ಸ್ಥಾನಕ್ಕೆ ಸುಖ್ ಜಿಂದರ್ ರಾಂಧವ ಅವರ ಹೆಸರನ್ನು ಎ.ಐ.ಸಿ.ಸಿ ಅಂತಿಮಗೊಳಿಸಿದೆ ಎನ್ನಲಾಗಿದೆ.
ದೆಹಲಿಯ ಅಂಬಿಕಾ ಸೋನಿ ಅವರೊಂದಿಗೆ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಮುಖ್ಯಮಂತ್ರಿಯೊಂದಿಗೆ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.