ನವದೆಹಲಿ, ಸೆ. 19 (DaijiworldNews/HR): ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ ಪ್ರಸ್ತಾವಿತ ಮುಖ್ಯಮಂತ್ರಿಯಾಗಿ ಸುಖ್ ದೇವ್ ಸಿಂಗ್ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ದಿಢೀರ್ ವಿದ್ಯಮಾನಗಳಲ್ಲಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ನೂತನ ಪಂಜಾಬ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಈ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಟ್ವೀಟ್ ಮಾಡಿದ್ದು, "ಪಂಜಾಬ್ನ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಆಯ್ಕೆಯಾಗಿದ್ದಾರೆ" ಎಂದು ತಿಳಿಸಿದ್ದಾರೆ.