ಉನ್ನಾವೋ, ಸೆ 20 (DaijiworldNews/MS): ಉತ್ತರಪ್ರದೇಶ ವಿಧಾನಸಭಾ ಸ್ಪೀಕರ್ ಹೃದಯ ನಾರಾಯಣ್ ದೀಕ್ಷಿತ್ , ಕಡಿಮೆ ಬಟ್ಟೆ ಧರಿಸುತ್ತಾರೆ ಎನ್ನುವುದನ್ನು ಆಧರಿಸಿ ಗೌರವಿಸಬಹುದಾದರೆ, ಬಾಲಿವುಡ್ ನಟಿ "ರಾಖಿ ಸಾವಂತ್ ಮಹಾತ್ಮ ಗಾಂಧಿಗಿಂತ ದೊಡ್ಡವರಾಗುತ್ತಿದ್ದರು" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉನ್ನಾವೋ ಜಿಲ್ಲೆಯ ಬಂಗರ್ಮೌ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಯೋಜಿಸಿದ್ದ ‘ಪ್ರಬುದ್ಧ ವರ್ಗ ಸಮ್ಮೇಳನ’ (ಬುದ್ಧಿಜೀವಿಗಳ ಸಭೆ) ಯಲ್ಲಿ ಅವರು ಈ ಹೇಳಿಕೆ ನೀಡಿದರು. "ನಮ್ಮ ಅಭಿಪ್ರಾಯದಲ್ಲಿ, ಯಾವುದೇ ವಿಷಯದ ಮೇಲೆ ಪುಸ್ತಕ ಬರೆಯುವ ಮೂಲಕ ಯಾರೂ ಬುದ್ಧಿಜೀವಿಗಳಾಗಲಿಲ್ಲ. ಹಾಗಿದ್ದರೆ ಇಷ್ಟು ವರ್ಷಗಳ ಕಾಲ , ನಾನು ಕನಿಷ್ಠ 6,000 ಪುಸ್ತಕಗಳನ್ನು ಓದಿದ್ದೇನೆ ಎಂದು ದೀಕ್ಷಿತ್ ಹೇಳಿದರು.
'ಗಾಂಧೀಜಿ ಅಲ್ಪ ಉಡುಗೆ ಧರಿಸುತ್ತಿದ್ದರು. ಅವರು ಕೇವಲ ಧೋತಿ ಕಟ್ಟುತ್ತಿದ್ದರು. ದೇಶವು ಅವರನ್ನು ಬಾಪು ಎಂದು ಕರೆಯಿತು. ಯಾರಾದರೂ ತಮ್ಮ ಬಟ್ಟೆಗಳನ್ನು ಕಡಿಮೆ ಮಾಡಿದರೆ ಶ್ರೇಷ್ಠರಾಗಲು ಸಾಧ್ಯವಾದರೆ, ರಾಖಿ ಸಾವಂತ್ ಮಹಾತ್ಮ ಗಾಂಧಿಗಿಂತ ದೊಡ್ಡವರಾಗುತ್ತಿದ್ದರು' ಎಂದು ತಿಳಿಸಿದ್ದಾರೆ.
ಅವರ ಭಾಷಣದ ವಿಡಿಯೋ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು"ಸಾಮಾಜಿಕ ಮಾಧ್ಯಮದಲ್ಲಿರುವ ಕೆಲವು ಸ್ನೇಹಿತರು ನನ್ನ ಭಾಷಣದ ವಿಡಿಯೋದ ಕ್ಲಿಪ್ ಅನ್ನು ಬೇರೆ ಅರ್ಥದಲ್ಲಿ ತೋರಿಸುತ್ತಿದ್ದಾರೆ ಎಂದು ಹಿಂದಿಯಲ್ಲಿ ಸ್ಪಷ್ಟೀಕರಣದ ಟ್ವೀಟ್ಗಳನ್ನು ಹಾಕಿದ್ದಾರೆ.
ಉತ್ತರಪ್ರದೇಶ ವಿಧಾನಸಭಾ ಸ್ಪೀಕರ್ ಹೃದಯ ನಾರಾಯಣ್ ದೀಕ್ಷಿತ್ ಭಾನುವಾರ ಮಾತನಾಡಿ, ಕೇವಲ ಕಡಿಮೆ ಉಡುಗೆ ಧರಿಸಿದರೆ, ಬಾಲಿವುಡ್ ನಟ "ರಾಖಿ ಸಾವಂತ್ ಮಹಾತ್ಮ ಗಾಂಧಿಗಿಂತ ದೊಡ್ಡವರಾಗುತ್ತಿದ್ದರು" ಎಂದು ಸಾಮಾಜಿಕ ಜಾಲತಾಣದ ಬಳಕೆದಾರರಿಂದ ಹರಿಹಾಯ್ದರು.