ಬೆಂಗಳೂರು,ಸೆ 20 (DaijiworldNews/MS): ಸಾರ್ವಜನಿಕ ಸ್ಥಳದಲ್ಲಿರುವ ದೇಗುಲ ತೆರವು ಮಾಡದಂತೆ ಪ್ರತ್ಯೇಕ ವಿಧೇಯಕ ಮಂಡಿಸಲು ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡಿನ ಪುರಾತನ ಪ್ರಸಿದ್ಧ ಹುಚ್ಚಗಣಿ ಮಹದೇವಮ್ಮ ದೇಗುಲ ತೆರವಿಗೆ ಬಿಜೆಪಿ ನಾಯಕರಲ್ಲೇ ತೀವ್ರ ಅಸಮಧಾನ ವ್ಯಕ್ತವಾಗಿತ್ತು. ಮಾತ್ರವಲ್ಲದೆ ಬಿಜೆಪಿ ಸರ್ಕಾರದ ವಿರುದ್ದ ತೀವ್ರ ಜನಾಕ್ರೋಶ ವ್ಯಕ್ತವಾಗಿತ್ತು.
ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ರಾಜ್ಯದ ಹಲವು ದೇವಾಲಯಗಳನ್ನು ನೆಲಸಮ ಮಾಡುವ ವಿಚಾರದಲ್ಲಿ ಉಂಟಾಗಿರುವ ಗೊಂದಲ, ವ್ಯಾಪಕ ವಿರೋಧ ಹಿನ್ನೆಲೆಯಲ್ಲಿ ಮೊದಲೇ ನೊಟೀಸ್ ನೀಡದೆ ಯಾವುದೇ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡುವಂತಿಲ್ಲ ಎಂದು ಹೇಳಿತ್ತು. ಮಾತ್ರವದಲ್ಲ ಸಿಎಂ ಬಸವರಾಜ ಬೊಮ್ಮಾಯಿ ಕೂಡ ದೇಗುಲ ತೆರವು ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದಿದ್ದರು.