ಬೆಂಗಳೂರು, ಸೆ.20 (DaijiworldNews/HR): ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ತಿರಸ್ಕರಿಸಿದ್ದ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದ್ದಾರೆ.
ಈ ಕುರಿತು ಸಚಿವರು ಮಾಹಿತಿ ನೀಡಿದ್ದು, 18414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 5,507 ವಿದ್ಯಾರ್ಥಿಗಳು ಪಾಸ್ ಆಗಿದ್ದು, 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು karresults.nic.in ಲಿಂಕ್ ಮೂಲಕ ಫಲಿತಾಂಶ ನೋಡ ಬಹುದಾಗಿದೆ.