ಚಂಡೀಗಡ, ಸೆ. 20 (DaijiworldNews/HR): ಪಂಜಾಬ್ನ 16ನೇ ಮುಖ್ಯಮಂತ್ರಿಯಾಗಿ ಚರಣ್ಜಿತ್ ಸಿಂಗ್ ಚನ್ನಿ(58) ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿಂದಿನ ಸರ್ಕಾರದಲ್ಲಿ ತಾಂತ್ರಿಕ ಶಿಕ್ಷಣ ಸಚಿವರಾಗಿದ್ದ ಚನ್ನಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಭಾನುವಾರ ಆಯ್ಕೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಪಂಜಾಬ್ನ ಮುಖ್ಯಮಂತ್ರಿ ಸ್ಥಾನ ದಲಿತ ಸಮುದಾಯದ ನಾಯಕರಿಗೆ ಸಿಕ್ಕಿದೆ.
ಚಮಕೌರ್ ಸಾಹಿಬ್ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುವ ಚನ್ನಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, 2015-16ರಲ್ಲಿ ಚನ್ನಿ ಅವರು ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು.
ಇನ್ನು ಕಾಂಗ್ರೆಸ್ನ 50ಕ್ಕೂ ಹೆಚ್ಚು ಶಾಸಕರು ಹೈಕಮಾಂಡ್ಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.