ನವದೆಹಲಿ, ಸೆ. 20 (DaijiworldNews/HR): ಸೆ.22ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೇರಿಕಾ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಉನ್ನತ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಮೋದಿ ಸೆ.23ರಂದು ಬೆಳಿಗ್ಗೆ ಅಮೇರಿಕಾದ ಉನ್ನತ ಸಂಸ್ಥೆಗಳ ಸಿಇಒಗಳನ್ನು ಭೇಟಿಯಾಗಲಿದ್ದು, ಆಯಪಲ್ ಸಂಸ್ಥೆಯ ಮುಖ್ಯಸ್ಥ ಟಿಮ್ ಕುಕ್ ಜೊತೆ ಕೂಡ ಮೋದಿ ಸಭೆ ನಡೆಸಲಿದ್ದಾರೆ.
ಮೋದಿ ಅವರು ಅಮೇರಿಕ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ಮೊದಲ ಭೌತಿಕ ದ್ವಿಪಕ್ಷೀಯ ಸಭೆಯನ್ನು ನಡೆಸಲಿದ್ದು, ಸೆಪ್ಟೆಂಬರ್ 24 ರಂದು ವಾಷಿಂಗ್ಟನ್ನಲ್ಲಿ ನಡೆಯುವ ಮೊದಲ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.
ಇನ್ನು ಸೆಪ್ಟೆಂಬರ್ 24 ರಂದುಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಕೌಂಟರ್ ಯೋಶಿಹೈಡ್ ಸುಗಾ ಅವರನ್ನು ಕೂಡ ಪ್ರಧಾನಿ ಭೇಟಿ ಮಾಡಲಿದ್ದಾರೆ.