ಮುಜಾಫರ್ನಗರ, ಸೆ. 20 (DaijiworldNews/HR): ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಇಬ್ಬರು ವ್ಯಕ್ತಿಗಳು ಅತ್ಯಾಚಾರವನ್ನು ರೆಕಾರ್ಡ್ ಮಾಡಿ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಘಟನೆ ಭೋಪಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಆರೋಪಿಗಳಾದ ಶುಭಂ ಮತ್ತು ಆಶಿಶ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರೂ ತಲೆಮರೆಸಿಕೊಂಡಿದ್ದಾರೆ ಎಂದು ಠಾಣಾಧಿಕಾರಿ ಸುಭಾಷ್ ಬಾಬು ತಿಳಿಸಿದ್ದಾರೆ.
ಸಂತ್ರಸ್ತೆಯ ತಾಯಿ ನೀಡಿರುವ ದೂರಿನ ಪ್ರಕಾರ, ಆರೋಪಿಗಳು ಬಾಲಕಿಗೆ ಹಣ್ಣು ನೀಡುವ ಆಮಿಷವೊಡ್ಡಿ ಸೀಬೆ ಮರಗಳಿದ್ದ ತೋಟಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದು, ಅಪರಾಧದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ಬಳಿಕ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.