ಬೆಂಗಳೂರು, ಸೆ. 20 (DaijiworldNews/HR): ಆಗಸ್ಟ್ 28, 29 ಹಾಗೂ 30ರಂದು ವೃತ್ತಿಪರ ಕೋರ್ಸ್ ಗಳ ಆಯ್ಕೆಗಾಗಿ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಪ್ರಕಟಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, "ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಜಾಲತಾಣ kea.kar.nic.inದಲ್ಲಿ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ" ಎಂದು ತಿಳಿಸಿದರು.
ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ ಮೈಸೂರಿನ ಪ್ರಮತಿ ಹಿಲ್ ವೀವ್ ಅಕಾಡೆಮಿಯ ಮೇಘನ್ ಎಚ್.ಕೆ. ಅವರು ಎಲ್ಲಾ ವಿಭಾಗದಲ್ಲೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಎಂಜಿನಿಯರಿಂಗ್, ಬಿ-ಫಾರ್ಮಾ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಯೋಗ ಮತ್ತು ನ್ಯಾಚುರೋಪಥಿಯಲ್ಲಿ ಮೇಘನ್ ಎಚ್. ಕೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು "ಒಟ್ಟು 530 ಕೇಂದ್ರಗಳಲ್ಲಿ ಈ ಬಾರಿ ಸಿಇಟಿ ಪರೀಕ್ಷೆ ನಡೆದಿದ್ದು, ಒಟ್ಟು 201834 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, ಈ ಪೈಕಿ 193447 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.