ಬೆಂಗಳೂರು, ಸೆ.21 (DaijiworldNews/HR): "ಕಾಂಗ್ರೆಸ್ನ ಅನೇಕ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲು ಸಿದ್ದತೆ ನಡೆಸಿದ್ದಾರೆ" ಎಂದು ಬಿ.ಎಸ್. ಯಡಿಯೂರಪ್ಪ ಹೊಸ ಬಾಂಬ್ವೊಂದನ್ನು ಸಿಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ನ ಹಲವು ಶಾಸಕರು ಬಿಜೆಪಿ ಸೇರ್ಪಡೆಯಾಗಲು ನಿರ್ಧರಿಸಿದ್ದು, ಬಿಜೆಪಿಗೆ ಯಾವ ಯಾವ ಶಾಸಕರು ಬರುತ್ತಾರೆಂದು ಸ್ವಲ್ಪ ದಿನದಲ್ಲೇ ಗೊತ್ತಾಗುತ್ತದೆ" ಎಂದರು.
ಇನ್ನು "ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140 ಸೀಟುಗಳನ್ನು ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ ಶಾಸಕರನ್ನು ಡಿ.ಕೆ.ಶಿವಕುಮಾರ್ ಸೆಳೆಯುವುದರಲ್ಲಿ ಯಾವುದೇ ಅರ್ಥವಿಲ್ಲ"ಎಂದು ಹೇಳಿದ್ದಾರೆ.