ಮುಂಬೈ, ಸೆ 21(DaijiworldNews/MS): ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಎರಡು ತಿಂಗಳ ನಂತರ ನಟಿ ಶಿಲ್ಪಾ ಶೆಟ್ಟಿಅವರ ಪತಿ ರಾಜ್ ಕುಂದ್ರಾ ಅವರಿಗೆ ಮುಂಬೈ ನ್ಯಾಯಾಲಯ ಸೆ.20 ರಂದು ಜಾಮೀನು ನೀಡಿದೆ. ರಾಜ್ ಕುಂದ್ರಾ ಹಾಗೂ ರಯಾನ್ ಥಾರ್ಪ್ಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 50 ಸಾವಿರ ರೂಪಾಯಿಗಳ ಶ್ಯೂರಿಟಿ ಮೇರೆಗೆ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ.
ಪತಿ ರಾಜ್ ಕುಂದ್ರಾ ಬಂಧನಗೊಂಡ ಬಳಿಕ ನಟಿ ಶಿಲ್ಪಾ ಶೆಟ್ಟಿ ಸಾರ್ವಜನಿಕವಾಗಿ ತೀವ್ರ ಮುಜುಗರ ಅನುಭವಿಸಿದ್ದರು. ಪತಿ ರಾಜ್ ಕುಂದ್ರಾ ಜಾಮೀನು ಪಡೆದ ಕೆಲವೇ ನಿಮಿಷಗಳಲ್ಲಿ ನಟಿ ಶಿಲ್ಪಾ ಶೆಟ್ಟಿ ಇನ್ಸ್ಟಾಗ್ರಾಮ್ ಸ್ಟೋರಿಯೊಂದನ್ನು ಪೋಸ್ಟ್ ಮಾಡಿ , ಭೀಕರ ಚಂಡಮಾರುತದ ನಂತರ ಸುಂದರವಾದ ಸಂಗತಿಗಳು ಸಂಭವಿಸಬಹುದು ಎಂಬುದನ್ನು ಸಾಬೀತುಪಡಿಸಲು ಕಾಮನಬಿಲ್ಲು ಅಸ್ತಿತ್ವದಲ್ಲಿದೆ’’ ಎಂಬ ಕೊಟೇಷನ್ ಹೊಂದಿರುವ ಚಿತ್ರವನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
ಜುಲೈ 19 ರಂದು ಬಂಧಿತರಾಗಿರುವ ರಾಜ್ ಕುಂದ್ರಾ , " ತನಿಖೆ ಮುಗಿದಿದೆ ಮತ್ತು ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ವಾದಿಸಿ" ಶನಿವಾರ ಜಾಮೀನು ಕೋರಿದ್ದರು. 50 ಸಾವಿರ ರೂಪಾಯಿಗಳ ಶ್ಯೂರಿಟಿ ಮೇರೆಗೆ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ.
ಜಾಮೀನು ಅರ್ಜಿಯಲ್ಲಿ ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣದಲ್ಲಿ ತನ್ನ ವಿರುದ್ದ ಸುಳ್ಳು ಆರೋಪ ಮಾಡಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣದಲ್ಲಿ ತಮ್ಮನ್ನು ‘ಬಲಿಪಶು’ ಮಾಡಲಾಗುತ್ತಿದೆ. ಅಶ್ಲೀಲ ಚಿತ್ರಗಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಯಾವುದೇ ಸಾಕ್ಷ್ಯ ಸಪ್ಲಿಮೆಂಟರಿ ಚಾರ್ಜ್ಶೀಟ್ನಲ್ಲಿಲ್ಲ ಎಂದು ಜಾಮೀನಿಗೆ ಮನವಿ ಮಾಡಿ ಸೆಪ್ಟೆಂಬರ್ 18 ರಂದು ನ್ಯಾಯಾಲಯಕ್ಕೆ ರಾಜ್ ಕುಂದ್ರಾ ಅರ್ಜಿ ಸಲ್ಲಿಸಿದ್ದರು. ಪರಿಣಾಮ ಸೆ.20ರಂದು ರಾಜ್ ಕುಂದ್ರಾಗೆ ಜಾಮೀನು ದೊರಕಿದೆ.