ಬೆಂಗಳೂರು, ಸೆ. 21 (DaijiworldNews/SM): ಸಿಲಿಂಡರ್ ಸ್ಪೋಟಗೊಂಡ ಬೆಂಕಿ ಆವರಿಸಿದ ಪರಿಣಾಮ ಅಪಾರ್ಟ್ ಮೆಂಟ್ ಒಳಗಡೆ ಇದ್ದ ಇಬ್ಬರು ಸಜೀವ ದಹನಗೊಂಡ ಘಟನೆ ನಗರದ ದೇವರಚಿಕ್ಕನಹಳ್ಳಿಯಲ್ಲಿ ನಡೆದಿದೆ.
ಸಂಜೆ ವೇಳೆ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಇಬ್ಬರು ಸಜೀವದಹನಗೊಂಡಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದು ಪರಿಸರದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.