ನವದೆಹಲಿ, ಸೆ 22 (DaijiworldNews/MS): ಅಖಿಲ ಭಾರತ ಮಜ್ಲಿಸ್-ಇ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಸಾದುದ್ದೀನ್ ಓವೈಸಿ ಮನೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ.
ಮಂಗಳವಾರ ಸಂಜೆ ವೇಳೆಗೆ ದೆಹಲಿಯ ಅಶೋಕ ರಸ್ತೆಯಲ್ಲಿರುವ ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸತ್ ಸದಸ್ಯ ಅಸಾದುದ್ದೀನ್ ಓವೈಸಿ ಅವರಿಗೆ ಸೇರಿದ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನೆಯ ವಸ್ತುಗಳನ್ನು ಧ್ವಂಸಗೊಳಿಸಿದ್ದರು.
ಧ್ವಂಸ ಮಾಡಿದ ಆರೋಪದ ಮೇಲೆ ಐದು ಮಂದಿ ಹಿಂದೂ ಸೇನೆ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈಶಾನ್ಯ ದೆಹಲಿಯ ಮಂಡೋಲಿ ಪ್ರದೇಶದ ನಿವಾಸಿಗಳಾದ ಐವರನ್ನು ಬಂಧಿಸಲಾಗಿದೆ ಎಂದು ಡಿಸಿಪಿ (ನವದೆಹಲಿ ಜಿಲ್ಲೆ) ದೀಪಕ್ ಯಾದವ್ ದೃಢ ಪಡಿಸಿದ್ದಾರೆ.ಅವರ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಹೇಳಿದರು.
ಈ ಘಟನೆಯ ಬಗ್ಗೆ ದೇಶದಲ್ಲಿ "ಸಂಸದರ ಮನೆಯೇ ಸುರಕ್ಷಿತವಾಗಿಲ್ಲದಿದ್ದರೆ, ಅಮಿತ್ ಶಾ ಯಾವ ರೀತಿಯ ಸಂದೇಶವನ್ನು ರವಾನಿಸುತ್ತಿದ್ದಾರೆ?" ಅಸಾದುದ್ದೀನ್ ಓವೈಸಿ ತಮ್ಮ ಟ್ವಿಟರ್ನಲ್ಲಿ ಕೇಂದ್ರ ಗೃಹ ಸಚಿವರನ್ನು ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ.