ನವದೆಹಲಿ, ಸೆ.22 (DaijiworldNews/PY): ಬುಧವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಾ ಪ್ರವಾಸಕ್ಕೆ ನಿರ್ಗಮಿಸಿದ್ದು, "ಜಪಾನ್ ಹಾಗೂ ಆಸ್ಟ್ರೇಲಿಯಾದೊಂದಿಗಿನ ಸಂಬಂಧವನ್ನು ಗಟ್ಟಿಗೊಳಿಸಲು ಇದೊಂದು ಸಂದರ್ಭ" ಎಂದಿದ್ದಾರೆ.
ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಉನ್ನತ ಮಟ್ಟದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಮೇರಿಕಾದ ಅಧ್ಯಕ್ಷ ಜೋ ಬಿಡೆನ್ ಅವರನ್ನು ಇದೇ ಮೊದಲ ಬಾರಿಗೆ ಭೇಟಿಯಾಗಲಿದ್ದಾರೆ.
"ಅಮೇರಿಕಾದೊಂದಿಗಿನ ಸಮಗ್ರ ಜಾಗತಿಕ ವ್ಯೂಹಾತ್ಮಕ ಪಾಲುದಾರಿಕೆಯನ್ನು ಬಲಪಡಿಸಲು, ನಮ್ಮ ವ್ಯೂಹಾತ್ಮಕ ಪಾಲುದಾರರಾದ ಜಪಾನ್ ಹಾಗೂ ಆಸ್ಟ್ರೇಲಿಯಾದೊಂದಿಗಿನ ಸಂಬಂಧಗಳನ್ನು ಗಟ್ಟಿಗೊಳಿಸಲು ಹಾಗೂ ಪ್ರಮುಖ ಜಾಗತಿಕ ವಿಷಯಗಳ ಕುರಿತು ನಮ್ಮ ಸಹಯೋಗವನ್ನು ಮುಂದುವರಿಸಲು ನನ್ನ ಅಮೇರಿಕಾ ಭೇಟಿ ಒಂದು ಸುಸಂದರ್ಭವಾಗಲಿದೆ" ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.