ಶೋಪಿಯಾನ್, ಸ.23 (DaijiworldNews/HR): ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚಿತ್ರಗಂ ಗ್ರಾಮದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಎನ್ಕೌಂಟರ್ನಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಉನ್ನತ ಭದ್ರತಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಉಗ್ರರು ಅಡಗಿರುವುದನ್ನು ತಿಳಿದ ಭದ್ರತಾ ಪಡೆ ಆ ಪ್ರದೇಶವನ್ನು ಸುತ್ತುವರಿದಿದ್ದು, ಈ ವೇಳೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರ ಬಲಿಯಾಗಿದ್ದಾನೆ.
ಇನ್ನು ಜಮ್ಮು ಕಾಶ್ಮೀರ ಪೊಲೀಸರು, ಭದ್ರತಾ ಪಡೆ ಮತ್ತು ಸಿಆರ್ಪಿಎಫ್ ಜಂಟಿ ಸುತ್ತುವರಿದ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.