ಬೆಂಗಳೂರು, ಸ.23 (DaijiworldNews/HR): ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಮಹಿಳೆಯೊಬ್ಬರನ್ನು ತನ್ನ ಪತಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ ಅವರ ಪತ್ನಿ ರೂಪಾ (34) ಕೊಲೆಯಾದವರು.
ಕಾಂತರಾಜ್ ಪ್ರತಿನಿತ್ಯ ಪತ್ನಿಯ ಶೀಲ ಶಂಕಿಸಿ ಪತ್ನಿ ಜತೆ ಕಾಂತರಾಜ್ ಜಗಳ ಮಾಡುತ್ತಿದ್ದು, ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಮನಸ್ತಾಪ ಉಂಟಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಸಂಜೆ ಕಾಂತರಾಜ್ ಪತ್ನಿಯ ಮೊಬೈಲ್ ಪರಿಶೀಲಿಸಿದಾಗ ಆಕೆ ಬೇರೆ ವ್ಯಕ್ತಿಯೊಂದಿಗೆ ಮಾತನಾಡಿರುವುದು ಕಂಡು ಬಂದಿತ್ತು. ಇದೇ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದ್ದು, ಆಕ್ರೋಶಗೊಂಡ ಕಾಂತರಾಜ್ ಅಡುಗೆ ಮನೆಯಲ್ಲಿದ್ದ ಚೂರಿಯಿಂದ ಪತ್ನಿ ರೂಪಾ ಕತ್ತಿಗೆ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ಇನ್ನು ಟ್ಯೂಷನ್ಗೆ ಹೋಗಿದ್ದ ಮಗ ಮನೆಗೆ ವಾಪಾಸ್ಸಾದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅನ್ನಪೂಣೇಶ್ವರಿನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.