ಕಲಬುರ್ಗಿ, ಸ.23 (DaijiworldNews/HR): ಸೇಡಂ ಪಟ್ಟಣದ ವಿಶ್ವನಗರ ಬಡಾವಣೆಯಲ್ಲಿ ಕೌಟುಂಬಿಕ ಕಲಹದಿಂದಾಗಿ ಪತ್ನಿ ಮತ್ತು ಮಗಳನ್ನೇ ಕಟ್ಟಿಗೆಯಿಂದ ಹೊಡೆದು ಹತ್ಯೆಮಾಡಿದ ಘಟನೆ ಘಟನೆ ನಡೆದಿದೆ.
ಹತ್ಯೆಯಾದವರನ್ನು ಜಗದೇವಿ (35 ವರ್ಷ), ಪ್ರಿಯಾಂಕ (11 ವರ್ಷ) ಎಂದು ಗುರುತಿಸಲಾಗಿದೆ.
ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದ ವಿಶ್ವನಗರ ಬಡಾವಣೆಯಲ್ಲಿ ಪಾನಿಪುರಿ ವ್ಯಾಪಾರವನ್ನು ಕಲಬುರ್ಗಿಯ ನಿವಾಸಿ ದಿಗಂಬರ ಹಣಮಂತಪ್ಪ ಗಾಂಜಲಿ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇನ್ನು ಕುಟುಂಬದಲ್ಲಿ ಕೌಟುಂಬಿಕ ಕಲಹ ಉಂಟಾಗಿದ್ದರಿಂದಾಗಿ ಪತ್ನಿ ಜಗದೇವಿ ಹಾಗೂ ಪುತ್ರಿ ಪ್ರಿಯಾಂಕಾ ಳನ್ನು ಕಟ್ಟಿಗೆಯಿಂದ ಹೊಡೆದು ಹತ್ಯೆಗೈದಿದ್ದಾನೆ.
ಹತ್ಯೆಗೈದು ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿರೋದಾಗಿ ತಿಳಿದು ಬಂದಿದೆ.
ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.