ಬೆಂಗಳೂರು, ಸ.23 (DaijiworldNews/HR): ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರೋ ಮತ್ತೊಂದು ಘೋರ ದುರಂತ ಘಟನೆ ಚಾಮರಾಜಪೇಟೆಯ ರಾಯನ್ ಸರ್ಕಲ್ ನಲ್ಲಿಸಂಭವಿಸಿದೆ.
ಸಾಂಧರ್ಭಿಕ ಚಿತ್ರ
ಸಿಲಿಂಡರ್ ಸ್ಫೋಟದ ತೀವ್ರತೆಗೆ ಮೂವರ ದೇಹಗಳು ಛಿದ್ರಗೊಂಡು ದೂರ ಹಾರಿ ಹೋಗಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದು, ಸ್ಥಳೀಯ ಜನರು ತೀವ್ರ ಆತಂಕಗೊಂಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ದೇವರಚಿಕ್ಕನಹಳ್ಳಿಯ ಅಪಾರ್ಮೆಂಟ್ ಒಂದರಲ್ಲಿ ಬೆಂಕಿ ಹೊತ್ತಿಕೊಂಡು ಇಬ್ಬರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಚಾಮರಾಜಪೇಟೆಯ ರಾಯನ್ ಸರ್ಕಲ್ ನಲ್ಲಿ ನಡೆದಿದೆ.