ನವದೆಹಲಿ, ಸೆ 24 (DaijiworldNews/MS): ಕೋವಿಡ್ ಸೋಂಕು ದೃಢವಾದ ಒಂದು ತಿಂಗಳ ಒಳಗೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳು ಕೂಡ ₹50,000 ಪರಿಹಾರ ಧನ ಪಡೆಯಲು ಅರ್ಹತೆ ಹೊಂದಿರುತ್ತವೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕೋವಿಡ್ -19 ಎಂದು ಗುರುತಿಸಿದ 30 ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬ ಸದಸ್ಯರು ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಅಡಿಯಲ್ಲಿ ನೀಡಲಾದ ಹಣಕಾಸಿನ ಸಹಾಯವನ್ನು ಪಡೆಯಲು ಅರ್ಹರಾಗಿರುತ್ತಾರೆ.
ಸೋಂಕು ದೃಢಪಟ್ಟು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ವೇಳೆ ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯದೆ ಇದ್ದ ಸಂದರ್ಭದಲ್ಲಿ ಸೋಂಕಿತರು ಆತ್ಮಹತ್ಯೆ ಮಾಡಿಕೊಂಡಿದ್ದರೆ ಅವುಗಳನ್ನೂ “ಕೊರೊನಾ ಸಾವು’ ಎಂದು ಪರಿಗಣಿಸಿ, ಪರಿಹಾರ ನೀಡಲಾಗುತ್ತದೆ ಎಂದು ನ್ಯಾ| ಎಂ.ಆರ್.ಶಾ ಮತ್ತು ನ್ಯಾ| ಎ.ಎಸ್.ಬೋಪಣ್ಣ ನೇತೃತ್ವದ ನ್ಯಾಯಪೀಠಕ್ಕೆ ಸರಕಾರ ವಿವರಿಸಿದೆ.
ಸೋಂಕಿನಿಂದ ಸಾವಿಗೀಡಾದ ವ್ಯಕ್ತಿಯ ಕುಟುಂಬ ಸದಸ್ಯರು ತಮ್ಮ ವ್ಯಾಪ್ತಿಯ ಜಿಲ್ಲಾ ಸಮಿತಿಯ ಮುಂದೆ ನಿಯಮಗಳ ಅನ್ವಯ ಪರಿಹಾರ ಕೋರಿ ಅರ್ಜಿ ಸಲ್ಲಿಕೆ ಮಾಡಬಹುದು ಎಂದೂ ಹೇಳಿದೆ.