ನವದೆಹಲಿ, ಸೆ.24 (DaijiworldNews/HR): ಅಖಾಡ ಪರಿಷತ್ನ ಮುಖ್ಯಸ್ಥ ಮಹಾಂತ ನರೇಂದ್ರ ಗಿರಿ ಸಾವಿನ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಸಿಬಿಐ ವಿಶೇಷ ತನಿಖಾ ತಂಡವೊಂದನ್ನು ರಚಿಸಿದೆ ಎಂದು ತಿಳಿದು ಬಂದಿದೆ.
ಸೋಮವಾರ ಸಂಜೆ ಮಹಾಂತ ನರೇಂದ್ರ ಗಿರಿ ಅವರು ಪ್ರಯಾಗರಾಜ್ನ ದರ್ಗಾಂಜ್ ಪ್ರದೇಶದ ಬಘಂಬರಿ ಮಠದ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಮೇಲ್ನೋಟಕ್ಕೆ ನರೇಂದ್ರ ಗಿರಿ ಅವರ ಸಾವು ಆತ್ಮಹತ್ಯೆಯಂತೆ ಕಂಡುಬಂದರೂ, ಅವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.
ಇನ್ನು ನರೇಂದ್ರ ಗಿರಿ ಅಸಹಜ ಸಾವಿನಲ್ಲಿ ಅವರ ಶಿಷ್ಯ ಮಹಾಂತ ಜ್ಞಾನ ದಾಸ್ ಕೈವಾಡವಿದೆ ಎಂಬ ಮಾತುಗಳು ಮುನ್ನೆಲೆಗೆ ಬಂದಿದ್ದು, ದಾಸ್ ಅವರು ಕ್ರಿಮಿನಲ್ ಚಟುವಟಿಕೆಗಳು ಮತ್ತು ಆಕ್ಷೇಪಾರ್ಹ ನಡವಳಿಕೆಯ ಆರೋಪಗಳನ್ನು ಎದುರಿಸುತ್ತಿದ್ದಾರೆ.