ಲಖನೌ, ಸೆ.24 (DaijiworldNews/HR): ಹಿಂದುಳಿದ ವರ್ಗಗಳ ಜಾತಿ ಗಣತಿ ನಡೆಸಲು ನಿರಾಕರಿಸಿರುವ ಕೇಂದ್ರ ಸರ್ಕಾರದ ಧೋರಣೆ ಬಗ್ಗೆ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿಎಸ್ಪಿ ನಾಯಕಿ, "ಕೇಂದ್ರ ಸರ್ಕಾರವು ಹಿಂದುಳಿದ ವರ್ಗಗಳ ಜಾತಿ ಗಣತಿಯನ್ನು ನಡೆಸಲು ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸುವ ಮೂಲಕ, ಬಿಜೆಪಿ ತನ್ನ ಚುನಾವಣಾ ಹಿತಾಸಕ್ತಿಗಾಗಿ ಒಬಿಸಿಯನ್ನು ಹೇಗೆ ಬಳಸಿಕೊಳ್ಳುತ್ತದೆ ಎಂಬುದನ್ನು ಬಹಿರಂಗಪಡಿಸಿದ್ದು, ಇದು ತೀವ್ರ ಕಳವಳಕಾರಿ ವಿಷಯ. ಇದರಿಂದ ಬಿಜೆಪಿಯ ಮಾತು ಮತ್ತು ಕೃತಿ ನಡುವೆ ಎಷ್ಟು ವ್ಯತ್ಯಾಸವಿದೆ ಎಂಬುದು ಗೊತ್ತಾಗುತ್ತದೆ" ಎಂದಿದ್ದಾರೆ.
ಇನ್ನು ಹಿಂದುಳಿದ ವರ್ಗಗಳ ಜಾತಿ ಗಣತಿ ನಡೆಸುವುದನ್ನು ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.