ಬೆಂಗಳೂರು, ಸೆ.24 (DaijiworldNews/HR): ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಮಗ ನಟ, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಶುಕ್ರವಾರ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನೀಡಿದ್ದು, ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿರೋದಾಗಿ ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ , "ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ" ಎಂದು ಹೇಳಿದ್ದಾರೆ.