ಬೆಂಗಳೂರು, ಸೆ.24 (DaijiworldNews/PY): ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುವುದಾಗಿ ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ ಘೋಷಿಸಿದ್ದಾರೆ.
ಬಿ ಎಸ್ ಯಡಿಯೂರಪ್ಪ ಅವರಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಲೋಕಸಭೆ ಮಾದರಿಯಲ್ಲಿ ಅತ್ಯುತ್ತಮ ಪ್ರಶಸ್ತಿ ನೀಡುವಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸೂಚನೆ ನೀಡಿದ್ದರು.
"ರಾಜಕೀಯದಲ್ಲಿ ಯುವ ಪೀಳಿಗೆಗೆ ಪಕ್ಷಗಳು ಆದ್ಯತೆ ನೀಡಬೇಕು. ನಾವೆಲ್ಲರೂ ಶಾಸನಸಭೆಯಲ್ಲಿ ಒಟ್ಟಾಗಿ ಚಿಂತನೆ ನಡೆಸಬೇಕು. ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಲುವಾಗಿ ಮಗ್ನರಾಗಬೇಕು ಎಂದು ವಿಧಾನಸಭೆ, ಪರಿಷತ್ನ ಎಲ್ಲಾ ಸದಸ್ಯರಲ್ಲಿ ಮನವಿ ಮಾಡುವೆ" ಎಂದು ವಿಧಾನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದರು.