ಬೆಂಗಳೂರು, ಸೆ.24 (DaijiworldNews/PY): ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟಗೊಂಡ ಘಟನೆ ಆನೇಕಲ್ನ ಅತ್ತಿಬೆಲೆಯಲ್ಲಿ ನಡೆದಿದೆ.
ಬಾಯ್ಲರ್ ಸ್ಪೋಟಗೊಂಡ ಪರಿಣಾಮ 3 ಕಿ. ಮೀ ಹೊಗೆ ವ್ಯಾಪಿಸಿದೆ. ಈಗಾಗಲೇ ಏಳು ಮಂದಿ ಗಾಯಗೊಂಡಿದ್ದು, ಓರ್ವ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಕಾರ್ಯಚರಣೆ ನಡೆಸಿ ಬೆಂಕಿ ನಂದಿಸುವ ಕಾರ್ಯ ಮುಂದುವರಿಸಿದ್ದಾರೆ.
ಘಟನಾ ಸ್ಥಳಕ್ಕೆ ಆನೇಕಲ್ ವಿಭಾಗದ ಡಿವೈಎಸ್ಪಿ ಮಲ್ಲೇಶ್ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಈ ಕಂಪೆನಿಯಲ್ಲಿ ಈ ಹಿಂದೆಯೂ ಬೆಂಕಿ ಅವಘಡ ಸಂಭವಿಸಿತ್ತು ಎನ್ನಲಾಗಿದೆ.